HomeFresh Newsಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು.

ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇ ಗೌಡರವರು 14ನೇ ಶತಮಾನದಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಅವರ ದೂರ ದೃಷ್ಠಿಯ ಕಲ್ಪಣೆಗಳು ಮಹತ್ವವಾಗಿದ್ದು 21ನೇ ಶತಮಾನದಲ್ಲಿಯೂ ನೆನಪಿಸಿಕೊಳ್ಳಲಾಗುತ್ತಿದೆ. ಸುಂದರ ನಗರ ನಿರ್ಮಾಣ, ವ್ಯಾವಹಾರಿಕ ಕೇಂದ್ರಗಳ ನಿರ್ಮಾಣ, ವಿವಿಧ ಕಸುಬುಗಳಿಗೆ ಪೂರಕವಾಗಿ ಮಾರುಕಟ್ಟೆ ನಿರ್ಮಾಣ, ಕೃಷಿಕರಿಗೆ ಆವಶ್ಯಕವಾದ ಸೌಲಭ್ಯಗಳು, ಕೆರೆ ಉದ್ಯಾನವನ, ದೇವಸ್ಥಾನಗಳ ನಿರ್ಮಾಣ ಸುಮದರವಾಗಿ ನಿರ್ಮಿಸಿಕೊಟ್ಟು ಬೆಂಗಳೂರನ್ನು ವಿಶ್ವಕ್ಕೇ ಮಾದರಿ ನಗರವಾಗಿ ನಿರ್ಮಿಸಿಕೊಟ್ಟಿದ್ದರು.

ಸಂಸ್ಕರಣಾ ಉಪನ್ಯಾಸ ನೀಡಿದ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರ ಡಾ.ಶ್ರೀಧರ ಗೌಡ ಪಾಣತ್ತಿಲ ಮಾತನಾಡಿ, ಹಿಂದಿನ ಬೇರುಗಳ ಸಾಧನೆಗಳು ಇತಿಹಾಸಲ್ಲಿ ಅಡಗಿದೆ. ಮಹಾನ್ ವ್ಯಕ್ತಿಗಳ ಜನ್ಮ ದಿನಾಚರಣೆಯ ಮೂಲಕ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸುವ ಮೂಲಕ ಗೌರವ ನೀಡಬೇಕು ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಕೆಂಪೇಗೌಡರ ಜಯಂತಿ ಆಚರಣೆಯ ಮೂಲಕ ಅವರ ಆದರ್ಶವನ್ನು ತಿಳಿಸಿಕೊಡುವ ಕಾರ್ಯವಾಗುತ್ತಿದೆ. ಅವರ ಕಲ್ಪಣೆಯ ನಗರ, ಅವರ ದೂರದೃಷ್ಟಿ ಯ ಚಿಂತನೆಗಳನ್ನು ಇಂದಿನ ಜನತೆ ಮನಗಾಣುವಂತಾಗಿದೆ ಎಂದರು.

ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾಗಿರುವ ತಹಶಿಲ್ದಾರ್ ಶಿವಶಂಕರ್, ಕಾರ್ಯದರ್ಶಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಇ., ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments