HomeFresh Newsಬಿ.ಎಸ್. ಯಡಿಯೂರಪ್ಪಗೆ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’

ಬಿ.ಎಸ್. ಯಡಿಯೂರಪ್ಪಗೆ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಯ ಪೋಷಕರು ಅಥವಾ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳು ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡುವುದು ಈ ದತ್ತಿಯ ಆಶಯವಾಗಿದೆ. 

ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿರುವ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿಗೆ ನಿರಂತರ ಕೊಡುಗೆ ನೀಡಿದ್ದಾರೆ. ಅವರಿಗಿರುವ ಕನ್ನಡದ ಬಗೆಗಿನ ಕಾಳಜಿ ಮತ್ತು ಸಾಂಸ್ಕೃತಿಕ ಕೊಡುಗೆಯನ್ನು ಗಮನಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments