ಕಟೀಲು ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ, ದೇವಿಯ ದರ್ಶನ ಪಡೆದ ಕರುನಾಡ ಚಕ್ರವರ್ತಿ

ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲಿನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಪತ್ನಿ ಪ್ರೀಯಾ ಜೊತೆ ಆಗಮಿಸಿದರು.
ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ನಟ ಸುದೀಪ್ ದಂಪತಿಗಳು ಕಟೀಲು ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು, ದೇವಸ್ಥಾನದ ವತಿಯಿಂದ ಸುದೀಪ್ ಗೆ ಆತ್ಮೀಯ ಗೌರವ ಸಮರ್ಪಣೆ ಮಾಡಲಾಯಿತು