ಕಿನ್ನಿಗೋಳಿ : ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಧಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ‌ ನಡೆಸಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಕಟೀಲು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಗೊಂಡವರನ್ನು ಸ್ಧಳೀಯ ನಿವಾಸಿ ಲಿಗೋರಿ (58) ಎಂದು ಗುರುತಿಸಲಾಗಿದೆ.ಗಾಯಾಳು ಲಿಗೋರಿ ಹೈನುಗಾರರಾಗಿದ್ದು ದನಗಳಿಗೆ ಮೇವು ತರಲು ಹೋದಾಗ ಈ ಘಟನೆ ನಡೆದಿದ್ದು ಲಿಗೋರಿ ಅವರು ಧೈರ್ಯದಿಂದ ಚಿರತೆಯನ್ನು ಎದುರಿಸಿದ್ದು ಕೂಡಲೇ ಚಿರತೆ ಸ್ಧಳದಿಂದ ಪಲಾಯನಗೈದಿದೆ ಎನ್ನಲಾಗಿದೆ.ಚಿರತೆ ದಾಳಿಯಿಂದ ಲಿಗೋರಿಯವರ ಮುಖಕ್ಕೆ ಕೈಗೆ ಕಾಲಿಗೆ ಸ್ವಲ್ಪ ಗಾಯಗಳಾಗಿದ್ದು ಅಪಾಯದಿಂದ ಪವಾಡಸದೃಶ‌ ಪಾರಾಗಿದ್ದಾರೆ.ಈ ಭಾಗದಲ್ಲಿ‌ಕಳೆದ ವಾರದ ಹಿಂದೆ ಕೂಡ ಚಿರತೆ ಪ್ರತ್ಯಕ್ಷವಾಗಿದ್ದು ಸ್ಧಳೀಯರಾದ ಶಿವಪ್ರಸಾದ್ ಭಟ್ ಎಂಬವರು ಎಚ್ಚರಿಕೆಯಿಂದ ಇರುವಂತೆ ಮಾಹಿತಿ‌ ನೀಡಿದ್ದರು

Related Posts

Leave a Reply

Your email address will not be published.