HomeFresh Newsಕಿನ್ನಿಗೋಳಿ ಸಮೀಪದ ಮೂರುಕಾವೇರಿ ಬಳಿ ಅಪಘಾತ : ಓರ್ವ ಮೃತ್ಯು

ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಬಳಿ ಅಪಘಾತ : ಓರ್ವ ಮೃತ್ಯು

ರಾಜ್ಯ ಹೆದ್ದಾರಿಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರ ಪೈಕಿ ಓರ್ವ ಮೃತ ಪಟ್ಟರೆ ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.ಮೃತರನ್ನು ಮೂಡುಬಿದಿರೆ ಸಮೀಪದ ಬೆಳುವಾಯಿ ನಿವಾಸಿ ರಾಮಣ್ಣ ಎಂದು ಗುರುತಿಸಲಾಗಿದೆ.

ಐಕಳ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಾರಿಗುಡಿ ಬಳಿ ಕಾರ್ನಾಡ್ ಕಡೆಯಿಂದ ಬೆಳುವಾಯಿ ಕಡೆಗೆ ಹೋಗುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದು ಗಂಭೀರವಾಗಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಾಲಿಸಿದ್ದು ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಕಾರಿನಲ್ಲಿದ್ದವರು ಕಟ್ಟಡ ಕಾರ್ಮಿಕರು ಎಂದು ತಿಳಿದು ಬಂದಿದೆ.ಕೆಲಸ ಮುಗಿಸಿ ಮೂಡಬಿದಿರೆಯ ಬೆಳುವಾಯಿ ಕಡೆಗೆ ಹೋಗುತ್ತಿದ್ದರು.ಸ್ಧಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments