HomeFresh Newsಕಿನ್ನಿಗೋಳಿ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕಿನ್ನಿಗೋಳಿ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕಿನ್ನಿಗೋಳಿ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸರಕಾರಿ ಪ್ರೌಢಶಾಲೆ ನಡುಗೋಡು ಇಲ್ಲಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ಭಟ್ ರವರು ಯೋಗದ ಮಹತ್ವ ಹಾಗೂ ಅದರ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ, ಯೋಗವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಖಜಾಂಚಿಗಳಾದ ರೋ.ಶರತ್ ಶೆಟ್ಟಿ ಉಪಸ್ಥಿತರಿದ್ದರು ಹಾಗೂ ಯೋಗ ತರಬೇತಿದಾರರಾದ ಶ್ರೀಮತಿ ಮಧುಶ್ರೀಯವರು ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿ ಯೋಗಾಭ್ಯಾಸದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ವಿಂಧ್ಯಾ, ಉಪಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷ್ಮಿ ನಾರಾಯಣ ಭಟ್ ಹಾಗೂ ಶಾಲೆಯ ಶಿಕ್ಷಕ, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಿತಾ ಗುರುರಾಜ್ ರವರು ಸ್ವಾಗತಿಸಿದರು. ಶ್ರೀಮತಿ ಅಶ್ಮಿತಾವರು ವಂದನಾರ್ಪಣೆ ಸಲ್ಲಿಸಿ, ಶ್ರೀಮತಿ ಸರಿತಾವರು ಕಾರ್ಯಕ್ರಮವನ್ನು ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments