ಕೊಡಗು : SSLC ವಿದ್ಯಾರ್ಥಿನಿಯ ಕೊಲೆ ಪ್ರಕರಣ – ಆರೋಪಿಯ ಬಂಧನ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.

ಸೂರ್ಲಬ್ಬಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಮೀನಾ, ಈ ಕುಗ್ರಾಮದಲ್ಲಿ ಈ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಏಕೈಕ ವಿದ್ಯಾರ್ಥಿನಿ. ಆದರೆ ಆಕೆಯ ದುರಂತ ನೋಡಿ. ಒಂದು ಕಡೆ ಮೀನಾ ಮೇ 09ರಂದು ಎಸ್‌ಎಸ್‌ಎಲ್‌ಸಿ ಪಾಸ್ ಆದ ಖುಷಿಯಲ್ಲಿದ್ದಳು. ಮತ್ತೊಂದು ಕಡೆ ಅವತ್ತೇ ಆಕೆಯ ಪ್ರಿಯಕರನ ಜೊತೆ ಎಂಗೇಜ್ಮೆಂಟ್ ಕೂಡ ಆಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ 18 ವರ್ಷ ತುಂಬುವ ವರೆಗೆ ಮೀನಾಳಿಗೆ ಮದುವೆ ಮಾಡದಂತೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಈ ವಿಚಾರಣೆ ಜಗಳ ಶುರು ಮಾಡಿದ್ದ ಮೀನಾಳ ಪ್ರಿಯಕರ ಮಚ್ಚು ತಂದು ಮೀನಾಳ ಕತ್ತು ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published.