ರಸ್ತೆ ರಫಘಾತದಲ್ಲಿ ಕೊಡಂಗೆಯ ಸದಾಶಿವ ಆಚಾರ್ಯ ನಿಧನ

ಬಂಟ್ವಾಳ: ಇಲ್ಲಿನ ಕೊಡಂಗೆ ನಿವಾಸಿ ಸದಾಶಿವ ಆಚಾರ್ಯ (77) ಅವರು ಶುಕ್ರವಾರ ತಡರಾತ್ರಿ ಬಿ.ಸಿ.ರೋಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದರು.ಮೃತರು ಪತ್ನಿ 4ಗಂಡು ಹಾಗೂ 5ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ ಸಂಬಂಧಿಯ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಬಿ.ಸಿ.ರೋಡಿನ ಪದ್ಮ ಪೆಟ್ರೋಲ್ ಪಂಪ್ ಬಳಿ ಆಕಸ್ಮಿಕವಾಗಿ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ರ, ಮೊಮ್ಮಗ ಸಹಿತ ಇತರ 3 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೃತರು ಮರದ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ

Related Posts

Leave a Reply

Your email address will not be published.