HomeFresh Newsಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತ, ಸಮ್ಮಿಶ್ರ ಸರ್ಕಾರ ಬರುವುದಿಲ್ಲ- ಕೋಡಿಮಠ...

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತ, ಸಮ್ಮಿಶ್ರ ಸರ್ಕಾರ ಬರುವುದಿಲ್ಲ- ಕೋಡಿಮಠ ಶ್ರೀ ಭವಿಷ್ಯ…!

ಶಿವಮೊಗ್ಗ:-ಕೋಡಿಮಠ ಶ್ರೀಗಳು ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯ ಇದೀಗ ಬಾರಿ ಚರ್ಚೆಗ
ಕಾರಣವಾಗಿದ್ದುರಾಜಕೀಯ ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಕುರಿತು ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿಯುತ್ತಾರೆ.ಅವರ ಭವಿಷ್ಯಗಳು ನಿಖರವಾಗಿರುತ್ತವೆ ಎಂಬ ನಂಬಿಕೆ ಇದೆ. ರಾಜ್ಯದಲ್ಲಿ ಪ್ರಸ್ತುತ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕೋಡಿಮಠ ಶ್ರೀಗಳು ರಾಜಕೀಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ.ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಈ ಬಾರಿ ಬರುವುದಿಲ್ಲ. ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಳ್ಳುತ್ತದೆ ಎಂದು ಶ್ರೀಗಳು ಹೇಳಿದ್ದು, ಅವರ ಹೇಳಿಕೆ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಕುತೂಹಲ ಕೆರಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments