HomeFresh Newsಆರ್ ಎಸ್ ಎಸ್ ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ಆರ್ ಎಸ್ ಎಸ್ ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಯ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲದೆ ಭಾರತೀಯ ಜನತಾ ಪಕ್ಷದಲ್ಲೂ ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ ಬಳಿಕ ರಾಜಕಾರಣದಿಂದ ದೂರ ಇದ್ದು,ರಾ.ಸ್ವ.ಸೇ. ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೇರಮಜಲು ಗ್ರಾ.ಪಂ.ಅಧ್ಯಕ್ಷರಾಗಿ, ಫರಂಗೀಪೇಟೆ ವ್ಯ.ಸೇ.ಸ.ಸಂಘದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಕೊಡ್ಮಾಣ್ ಶ್ರೀಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ,ಕೊಡ್ಮಾಣ್ ಪ್ರೌಢಶಾಲಾ ಎಸ್ ಡಿಎಂಸಿ ಸದಸ್ಯರಾಗಿ ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.ಈ ಹಿಂದೆ ವಿಟ್ಲ ವಿಧಾನಸಭಾ ಕ್ಷೇತ್ರವಿದ್ದಾಗ ಬಿಜೆಪಿ ವಿಟ್ಲ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿದ್ದರು. ಸ್ಥಳೀಯವಾಗಿ ಯುವಕರ ಸಾಮಾಜಿಕ ಚಟುವಟಿಕೆಗೆ ಮಾರ್ಗದರ್ಶಕರು, ಪ್ರೇರಣಾಶಕ್ತಿಯಾಗಿದ್ದರು. ವಾಗ್ಮೀಯು ಆದ ಕಾಂತಪ್ಪ ಶೆಟ್ಟಿ ಅವರು ಹವ್ಯಾಸಿ ನಾಟಕ ಕಲಾವಿದರಾಗಿದ್ದು ಕೆಲ ನಾಟಕಗಳಲ್ಲಿ ಬಣ್ಣಹಚ್ಚಿದ್ದರು. ಸಂಘದಲ್ಲಿ ಕಾಂತಪ್ಪಣ್ಣ ಎಂದೇ ಚಿರಪರಿಚಿತರಾಗಿದ್ದ ಅವರು ಪತ್ನಿ ಹಾಗೂ ತಮ್ಮನ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಸಂಸದ ನಳಿನ್ ಕುಮಾರ್ ಕಟೀಲ್,ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments