ಕೊಲ್ಲಮೊಗ್ರದಲ್ಲಿ ಮದ್ಯಮುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆ

ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಅಕ್ರಮ ಮದ್ಯದಂಗಡಿ ತೆರೆದಿರುವ ಬಗ್ಗೆ ಪ್ರತಿಭಟನಾ ಸಭೆಯು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು.

ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಮದ್ಯವರ್ಜನ ಶಿಬಿರಗಳನ್ನು ಆಯೋಜಿಸಿ, ಅನೇಕರನ್ನು ಮದ್ಯಮುಕ್ತರನ್ನಾಗಿಸಿ ಊರನ್ನು ಸುಭೀಕ್ಷೆ ಮಾಡಬೇಕೆಂದು ಹೊರಟಿದ್ದರು. ಅದರಂತೆ ಇಲ್ಲಿಯೂ 2 ಸಲ ಮದ್ಯವರ್ಜನ ಶಿಬಿರಗಳಾಗಿದೆ. ಈ ಮೂಲಕ ಅನೇಕ ಕುಟುಂಬಗಳು ಹೊಸ ಜೀವನ ನಡೆಸುತ್ತಿರುವುದು ಎಲ್ಲರಿಗೂ ಗೊತ್ತಿದೆ. ಆದರೆ ಈಗ ಇಲ್ಲಿ ಮದ್ಯದಂಗಡಿ ತೆರೆದ ಕಾರಣ ಮತ್ತೆ ಅನೇಕ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುಂತಾಗಬಹುದೆAಬ ಆತಂಕ ಎಲ್ಲರಲ್ಲೂ ಇದೆ. ಊರವರ ವಿರೋಧ ಕಟ್ಟಿಕೊಂಡು ಮದ್ಯದಂಗಡಿ ತೆರೆದಿರುವುದು ಸರಿಯಲ್ಲ ಎಂಬುದನ್ನು ಅವರು ಯೋಚನೆ ಮಾಡಬೇಕಿತ್ತು. ನೀವಾಗಿಯೇ ತೆರೆದ ಮದ್ಯದಂಗಡಿಯನ್ನು ನೀವಾಗಿಯೇ ಮುಚ್ಚಿಸಿದರೆ ನಿಮಗೆ ಊರವರ ಮತ್ತು ಎಲ್ಲರ ಗೌರವ ಹೆಚ್ಚಾಗುತ್ತದೆ. ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧ ಆಗದಿದ್ದರೆ ಈ ಭಾಗದವರಿಗೆ ತೊಂದರೆ ಎಂದು ಹೇಳಿದರು.

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವಾಧ್ಯಕ್ಷ ಮಹೇಶ್ ರೈ ಮೇನಾಲ ಮಾತನಾಡಿ ಮದ್ಯದಂಗಡಿಗೆ ಸಂಬAಧಪಟ್ಟವರು ನಮ್ಮ ಭಾವನೆಗಳನ್ನು ಒಡೆದು, ನಮ್ಮಲ್ಲಿ ಬಿರುಕು ಉಂಟು ಮಾಡುವಂತೆ ಮಾಡಿ ಹೋರಾಟಕ್ಕೆ ಇಳಿದಂತೆ ಮಾಡಬಹುದು. ಅದಕ್ಕೆ ನಾವ್ಯಾರು ಕಿವಿಗೊಡಬಾರದು. ಇಂದು ಮತ್ತು ಈ ಹಿಂದೆ ಹೋರಾಟ ದಲ್ಲಿ ಭಾಗವಹಿಸಿದವರೆಲ್ಲರೂ ಒಟ್ಟಾಗಿ ನಿಂತು ಹೋರಾಟದ ನೇತೃತ್ವ ಪಡೆದುಕೊಂಡವರನ್ನು ಬಿಡದೆ ಮುಂದೆಯೂ ಪಾಲ್ಗೊಳ್ಳಬೇಕು ಎಂದರು.

ಸಭೆಯ ಅಧ್ಯಕ್ಷತೆಯನ್ನು ಹೋರಾಟ ಸಮಿತಿ ಅಧ್ಯಕ್ಷ ಮಾಧವ ಚಾಂತಾಳ ವಹಿಸಿದ್ದರು. ಪ್ರತಿಭಟನೆಯಲ್ಲಿ ಹೋರಾಟ ಸಮಿತಿ ಉಪಾಧ್ಯಕ್ಷ ಕೆ.ಪಿ. ಗಿರಿಧರ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.