ಕೊಲ್ಲೂರು: ಚರಂಡಿಗೆ ಉರುಳಿದ ಖಾಸಗಿ ಬಸ್. ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗಾಯ
ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 16 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ಗಾಯಗಳಾದ ಮಾಹಿತಿ ದೊರೆತಿದೆ.
ಶಿವಮೊಗ್ಗದಿಂದ ಕೊಲ್ಲೂರಿಗೆ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದ್ದು ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಕೊಲ್ಲೂರು ಪಿಯು ಕಾಲೇಜಿನ 10 ವಿದ್ಯಾರ್ಥಿಗಳು ಹಾಗೂ ಹೈಸ್ಕೂಲಿನ 6 ಮಂದಿ ವಿದ್ಯಾರ್ಥಿಗಳು ಸಹಿತ ಪ್ರಯಾಣಿಕರಿಗೆ ಗಾಯಗಳಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ 16 ವಿದ್ಯಾರ್ಥಿಗಳ ಪೈಕಿ 3 ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಹಿಂದಿರುಗಿದ್ದಾರೆ. ವಿದ್ಯಾರ್ಥಿಗಳು ರಜೆ ಮುಗಿಸಿ ಸೋಮವಾರ ಮತ್ತೆ ಬಸ್ಸಿನಲ್ಲಿ ವಾಪಾಸ್ಸಾಗುತ್ತಿದ್ದರು. ಕೊಲ್ಲೂರಿನ ಶಾಲೆಗೆ
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ, ಕೊಲ್ಲೂರು ಠಾಣೆಯ ಪಿಸೈಗಳಾದ ವಿನಯ್ ಕೊರ್ಲಹಳ್ಳಿ, ಸುಧಾರಾಣಿ ಭೇಟಿ ನೀಡಿದ್ದಾರೆ.