HomeFresh Newsಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲು

ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲು

ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ,ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ.

ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಂಡೆಕಲ್ಲೊಂದರ ಮೇಲೆ ಯುವಕ ನಿಂತಿದ್ದಾಗ ,ಅಕಸ್ಮಾತ್ತಾಗಿ ಕಾಲುಜಾರಿ ಬಿದ್ದಿದ್ದಾನೆ.

ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದು , ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments