ಕೊಲ್ಲೂರು : ನೀರುಪಾಲಾದ ಯುವಕನಿಗಾಗಿ ಮುಂದುವರೆದ ಶೋಧ
ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತದಲ್ಲಿ ಕೊಚ್ಚಿಹೋದ ಯುವಕ.
ಬಂಡೆಯ ತುದಿಯಲ್ಲಿ ನಿಂತು ಹತ್ತಿರದಿಂದ ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಮತ್ತು ಈಶ್ವರ್ ಮಲ್ಪೆ ಅವರ ಸಹಕಾರದಲ್ಲಿ ಶೋಧ ಕಾರ್ಯ ಮುಂದುವರೆದಿದೆ. ನಿನ್ನೆ ತಡರಾತ್ರಿವರೆಗೂ ಶೋಧ ಕಾರ್ಯ ಮುಂದುವರೆದಿದ್ದು, ಮಳೆ ಅಡ್ಡಿಯಾದ್ದರಿಂದ ಶೋಧ ಕಾರ್ಯ ನಿಲ್ಲಿಸಿದ್ದರು. ಇದೀಗ ಮತ್ತೆ ಶೋಧ ಕಾರ್ಯ ಮುಂದುವರೆಸಿದ್ದಾರೆ.