ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಬೇಸಿಗೆ ರಜೆಯ ಹಿನ್ನೆಲೆ ಹರಿದು ಬಂದ ಜನಸಾಗರ
ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು.
ಶಾಲಾ ಮಕ್ಕಳಿಗೆ ಬೇಸಿಗೆ ರಾಜಾ ಇರುವುದರಿಂದ ದೇವಳದಲ್ಲಿ ನಿರಂತರವಾಗಿ ಜನ ಜನಜಂಗುಳಿ ಸೇರುವ ನಿರೀಕ್ಷೆ ಇದೆ. ರಾಜ್ಯದ ನಾನಾ ಭಾಗಗಳಿಂದ ಭಕ್ತರು ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸುತ್ತಿದ್ದಾರೆ. ದೇವಳದ ಆಡಳಿತ ಸಮಿತಿ ವತಿಯಿಂದ ಕುಡಿಯುವ ನೀರು, ಪಾರ್ಕಿಂಗ್, ವಾಸ್ತವ್ಯದ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ದೇವಳದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ದೇವಾಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರು ಸರ್ವ ಸದಸ್ಯರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.