ಕುಂದಾಪುರ: ಕೊಲ್ಲೂರು ಕ್ಷೇತ್ರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಶೇಷ ಪೂಜೆ ಸಲ್ಲಿಕೆ
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ದೇವರ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು.
ದೇಗುಲಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್ ಗಂಟಿಹೊಳೆ , ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಅರ್ಚಕರಾದ ನರಸಿಂಹ ಅಡಿಗ, ಶ್ರೀಧರ ಅಡಿಗ, ಎನ್.ಗೋವಿಂದ ಅಡಿಗ, ರಾಮಚಂದ್ರ ಅಡಿಗ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ಅತುಲಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗೋಪಾಲ ನಾಡ, ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್ ಪಾಲ್ಗೊಂಡಿದ್ದರು.