ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆ : ಕೆರಳಿದ ಬಜರಂಗದಳ

ಕೊಲ್ಯ: ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆ, ಕೆರಳಿದ ಬಜರಂಗದಳದ ಕಾರ್ಯಕರ್ತರಿಂದ ಆಕ್ರೋಶ, ಯಾರೋ ಮಾಡಿದ ತಪ್ಪಿಗೆ ಶಾಸಕರ ವಿರುದ್ಧ ಪ್ರತಿಭಟನೆ…!ಉಳ್ಳಾಲ:ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರಿಗೆ ಸರಿಯಾಗಿ ಕ್ಲಾಸ್ ಕೊಟ್ಟ ಘಟನೆ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ಘಟಿಸಿತು.

ದಕ್ಷಿಣ ಕನ್ನಡ ಜಿಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವತಿಯಿಂದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ,ಅನ್ನಪ್ರಾಶನ, ಪೌಷ್ಟಿಕ ಆಹಾರ ಪ್ರದರ್ಶನ ಹಾಗೂ ಸೀಮಂತ ಕಾರ್ಯಕ್ರಮವನ್ನು‌ ಕೊಲ್ಯ ನಾರಾಯಣಗುರು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಚಾರ ಪ್ರಯುಕ್ತ ಸಭಾಂಗಣದ ಮುಂದೆ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಹಿಂದೂ‌ ಮಹಿಳೆಯೊಬ್ಬರ ಹಲವು ವರ್ಷಗಳ ಹಿಂದಿನ ಗರ್ಭಿಣಿಯಾಗಿದ್ದ ಭಾವಚಿತ್ರವನ್ನು‌ ಜಾಲತಾಣದಿಂದ ನಕಲು ಮಾಡಿ ಅಳವಡಿಸಲಾಗಿದ್ದು ಪಕ್ಕದಲ್ಲೇ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರ ಫೊಟೋ ಬಳಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಕೆರಳಿದ ಬಜರಂಗದಳದ ಕಾರ್ಯಕರ್ತರು ಬುಧವಾರ ಕಾರ್ಯಕ್ರಮ ನಡೆಯುತ್ತಿದ್ದ ನಾರಾಯಣಗುರು ಸಭಾಂಗಣದೊಳಗೆ ನುಗ್ಗಿ ಆಯೋಜಕರ ನಿರ್ಲಕ್ಷ್ಯತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಶಾಸಕರ ವಿರುದ್ಧ ಘೋಷಣೆ ಕೂಗಿದರು.

ಮಹಿಳೆಯರ ಬಗ್ಗೆ ಪುಂಖಾನುಪುಂಖವಾಗಿ ಹೊಗಳುವ ಸರಕಾರಿ ಮಹಿಳಾ ಅಧಿಕಾರಿಗಳು ಮಾಡಿದ ಕ್ರಮ‌ ಸಮಂಜಸವಲ್ಲ ಎಂದು ಆರೋಪಿಸಿ ಶಾಸಕ ಯು.ಟಿ. ಖಾದರ್ ಅವರ ವಿರುದ್ಧ ಘೋಷಣೆ ಕೂಗಿದರು.ಬಳಿಕ ಆಯೋಜಕರು ಕಾರ್ಯಕರ್ತರ ಮನವೊಲಿಸಿ ಫ್ಲೆಕ್ಸ್ ತೆರವುಗೊಳಿಸಿದರು.

Related Posts

Leave a Reply

Your email address will not be published.