ಕೊಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ದೇವಪ್ಪ ಗಟ್ಟಿ ನಿಧನ
ಉಳ್ಳಾಲ: ಕೊಣಾಜೆ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷ ಬೆಳ್ಮ ಕಟ್ಟಪುಣಿ ನಿವಾಸಿ ದೇವಪ್ಪ ಗಟ್ಟಿ (90) ಅಲ್ಪಕಾಲದ ಅಸೌಖ್ಯದಿಂದ ಜು.22ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಮೂವರು ಪುತ್ರರನ್ನು ಅಗಲಿದ್ದಾರೆ.
ಸೋಮೇಶ್ವರ ಸೋಮನಾಥ ದೇವಸ್ಥಾನದ ಬೃಹ್ಮಕಲಶೋತ್ಸವ, ಸಮಿತಿ ಉಪಾಧ್ಯಕ್ಷರಾಗಿ, ಗಟ್ಟಿ ಸಮಾಜ ಶ್ರೀ ಸೋಮನಾಥ ಸೇವಾ ಸಮಿತಿ ಅಧ್ಯಕ್ಷರಾಗಿ, ಮುಲಾರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಕೊಣಾಜೆ ಗ್ರಾಮ ರುದ್ರಭೂಮಿ ಸಮಿತಿಯ ಅಧ್ಯಕ್ಷರಾಗಿ, ಕಾರ್ಯನಿರ್ವಹಿಸಿರುವ ಇವರು ಮಂಗಳೂರು ತಾಲೂಕು ಭೂ ಅಭಿವೃದ್ಧಿ ಬ್ಯಾಂಕ್‍ನ ನಿರ್ದೇಶಕರಾಗಿ, ಕೊಣಾಜೆ ಯುಬಿಎಂಸಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕೊಣಾಜೆ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಇವರು ಗಟ್ಟಿ ಸಮಾಜ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಿಗೆ ಸಲಹೆಗಾರರಾಗಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.