ಕೊಣಾಜೆ: ಜ.13 ರಂದು ನರಿಂಗಾನ ಕಂಬಳೋತ್ಸವ-2024 ಉದ್ಘಾಟನೆ
![Naringana kambala](https://v4news.com/wp-content/uploads/2024/01/vlcsnap-2024-01-10-12h53m10s932-1140x620.png)
ಕೊಣಾಜೆ: ಮಂಗಳೂರು ವಿಧಾನ ಸಭಾ ಕ್ಷೇತ್ರ, ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ನರಿಂಗಾನ ಕಂಬಳವು ಎಲ್ಲಾ ಜಾತಿ, ಧರ್ಮ, ವರ್ಗಗಳ ಜನರು ಸೇರಿಕೊಂಡು ಮಾಡುವ ಒಂದು ಸಾರ್ವಜನಿಕ ಕಂಬಳವಾಗಿದೆ. ಕಂಬಳೋತ್ಸವ ಸೌಹಾರ್ದತೆಯಿಂದ ಸಾಮರಸ್ಯತೆಯಿಂದ ಇಡೀ ದೇಶಕ್ಕೆ ಮಾದರಿಯಾಗಿ ನಡೆಯಲಿದೆ. ಉದ್ಘಾಟನೆ ಸಮಾರಂಭ ಶನಿವಾರ ಜ. 13ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದ್ದು ಸರ್ವ ಧರ್ಮದ ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
![](https://v4news.com/wp-content/uploads/2024/01/ganesh-silks-add-1024x1024.jpg)