ಕೊಪ್ಪದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ
*ಚಿಕ್ಕಮಗಳೂರು:ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕೊಪ್ಪ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 21ರಂದು ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಚಿಕ್ಕಮಂಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹೆಚ್ ಎಂ ಸತೀಶ್,ಗಣೇಶ್ ಪೂಜಾರಿ,ವಾಸು ಪೂಜಾರಿ,ಸಂತೋಷ್ ಪೂಜಾರಿ ಹಾಗೂ ಕೊಪ್ಪ ಸಂಘದ ಸದಸ್ಯರು ಉಪಸ್ಥಿತಿ ಇದ್ದರು.ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.