ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಕೋಟ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.
ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು ನಾಯಕರಾದ ಗೌರವಾನ್ವಿತ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದೆ. ಈ ಬಾರಿ ಮತ್ತೊಮ್ಮೆ ದಾಖಲೆಯ ಅಂತರದಿಂದ ಗೆಲುವು ಸಾಧಿಸುವಲ್ಲಿ ಸಹಕಾರ ನೀಡುವ ಭರವಸೆ ನೀಡಿದರು ಎಂದಿದ್ದಾರೆ.