ವಿಧಾನ ಪರಿಷತ್ತಿನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಮಾಜೀ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇಮಕ
ವಿಧಾನ ಪರಿಷತ್ತಿನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಮಾಜೀ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇಮಕಗೊಂಡಿದ್ದಾರೆ. ಏಳು ತಿಂಗಳ ಬಳಿಕ ಬಿಜೆಪಿ ಈ ತೀರ್ಮಾನ ತೆಗೆದುಕೊಂಡಿದೆ.
ವಿಧಾನ ಪರಿಷತ್ತಿನಲ್ಲಿ ಉಪ ನಾಯಕರಾಗಿ ಸುನಿಲ್ ವಲ್ಯಾಪುರೆ ಅವರನ್ನು ನೇಮಿಸಲಾಗಿದೆ. ಅದೇ ವೇಳೆ ಎನ್. ರವಿಕುಮಾರ್ ಅವರನ್ನು ವಿಧಾನ ಪರಿಷತ್ತಿನಲ್ಲಿ ಮುಖ್ಯ ಸಚೇತಕರಾಗಿ ಬಿಜೆಪಿ ನೇಮಕ ಮಾಡಿದೆ.
ಹುಬ್ಬಳ್ಳಿ ಧಾರವಾಡ ಶಾಸಕ ಅರವಿಂದ ಬೆಲ್ಲದ ಅವರನ್ನು ವಿಧಾನ ಸಭೆಯಲ್ಲಿ ಉಪ ನಾಯಕರಾಗಿ ಮತ್ತು ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರನ್ನು ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸೂಚನೆಯಂತೆ ಈ ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.