HomeFresh Newsಕೊಟ್ಟಾರಚೌಕಿ ಸರ್ಕಲ್‍ಗೆ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಹೆಸರು

ಕೊಟ್ಟಾರಚೌಕಿ ಸರ್ಕಲ್‍ಗೆ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಹೆಸರು

ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್‍ಗೆ ಇಡಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ. ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ.

ಇದರ ಜೊತೆಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ. ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments