ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಾಪು ತಾಲೂಕು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪಡುಬಿದ್ರಿ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಡುಬಿದ್ರಿ ವಲಯದ ವತಿಯಿಂದ ನಡೆಯಲಿರುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಪಡುಬಿದ್ರಿ ಬೀಡು ರತ್ನಾಕರ ರಾಜ್ ಅರಸು ಕಿನ್ಯಕ್ಕ ಬಲ್ಲಾಳ್ ಅವರು ಬಿಡುಗಡೆಗೊಳಿಸಿದರು.
ನವೆಂಬರ್ 22ರಂದು ನಾರಾಯಣಗುರು ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಡುಬಿದ್ರಿ ವಲಯದ ಅಧ್ಯಕ್ಷ ಭುಜಂಗ ಆಚಾರ್ಯ, ವಲಯ ಮೇಲ್ವಿಚಾರಕ ಜಗದೀಶ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷೆ ಶಕುಂತಳ, ಜೊತೆ ಕಾರ್ಯದರ್ಶಿ ಜ್ಯೋತಿ, ಕೋಶಾಧಿಕಾರಿ ಸವಿತಾ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ದೇವಾಡಿಗ ಸೇರಿದಂತೆ ಒಕ್ಕೂಟದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿಸೆಂಬರ್ 6, 2026ರಂದು ಬೆಳಿಗ್ಗೆ 7.30ಕ್ಕೆ ಶ್ರೀ ಬಾಳಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ, ಪಡುಬಿದ್ರಿಯಲ್ಲಿ ನಡೆಯಲಿದೆ.
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಾಪು ತಾಲೂಕು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
RELATED ARTICLES

