HomeFresh Newsಕುಕ್ಕೆ:ಮಾ.24ರಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ:ಅರ್ಜಿಆಹ್ವಾನ

ಕುಕ್ಕೆ:ಮಾ.24ರಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ:ಅರ್ಜಿಆಹ್ವಾನ

ಕಡಬ : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ ತಮ್ಮ ಅರ್ಜಿಯನ್ನು ಶ್ರೀ ದೇವಳಕ್ಕೆ ಸಲ್ಲಿಸಬಹುದು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ಫೆ.20ರ ಒಳಗೆ ನೋಂದಾಣಿ
ಮಾ.24 ರಂದು ಬೆಳಗ್ಗೆ 11.00 ರಿಂದ 12.00ರ ವರೆಗೆ ನೆರವೇರುವ ವೃಷಭ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ.ಫೆ.20 ವಧು-ವರರು ನಿಗದಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.ಫೆ.24ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು.ಫೆ.28 ಅಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಮಾ.5ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅಥವಾ ಗ್ರಾಮ ಆಡಳಿತಾಧಿಕಾರಿಯಿಂದ ಅಥವಾ ತಹಶೀಲ್ದಾರರಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಸರಳ ಸಾಮೂಹಿಕ ವಿವಾಹವಾಗುವ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯ, ಪೇಟ, ಬಾಸಿಂಗ್ ಇತ್ಯಾದಿಗಳಿಗಾಗಿ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.5 ಸಾವಿರ ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣ, ಕಾಲುಂಗುರ ಇತ್ಯಾದಿಗಳಿಗೆ ರೂ.10 ಸಾವಿರ ನೀಡಲಾಗುವುದು. ಸುಮಾರು ರೂ 40 ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ನೀಡಲಾಗುವುದು. ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು.ಉಳಿದ ಶರತ್ತು ಹಾಗೂ ನಿಯಮಾವಳಿಗಳನ್ನು ಶ್ರೀ ದೇವಳದ ಸೂಚನಾ ಫಲಕ ಅಥವಾ ಕಚೇರಿ ವೇಳೆಯಲ್ಲಿ ಖುದ್ದಾಗಿ ಬಂದು ಮಾಹಿತಿಗಳನ್ನು ಪಡೆದುಕೊಳ್ಳಬಹುದು. 08257-281224, 236200, 281700, 281265 ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.ಅಥವಾ ಶ್ರೀ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments