HomeFresh Newsಕುಕ್ಕೆ: ಅ.28 ಗ್ರಹಣ ನಿಮಿತ್ತ ದರುಶನ ಸಮಯದಲ್ಲಿ ವ್ಯತ್ಯಯ

ಕುಕ್ಕೆ: ಅ.28 ಗ್ರಹಣ ನಿಮಿತ್ತ ದರುಶನ ಸಮಯದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಪ್ರಸಾದ ಬೋಜನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments