ಕುಕ್ಕೆ ಸುಬ್ರಹ್ಮಣ್ಯ ಭಾರಿ ಮಳೆ ಹಿನ್ನೆಲೆ : ಕ್ಷೇತ್ರ ದರ್ಶನಕ್ಕೆ ನಿರ್ಬಂಧ

ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಿಕೊಡಲಾಗುತ್ತಿದೆ.ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.
ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ ಗಮನಹರಿಸಬೇಕು.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ಒಂದೆರಡು ದಿನಗಳು ಕಾದು ಮಳೆ ಕಡಿಮೆಯಾದ ಬಳಿಕ ಕ್ಷೇತ್ರ ಸಂದರ್ಶಿಸುವಂತೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ಸಾರೆ.

Related Posts

Leave a Reply

Your email address will not be published.