ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಇದರ ಶತಮಾನೋತ್ಸವ ಸಮಿತಿ ಸಭೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಇದರ ಶತಮಾನೋತ್ಸವ ಕಾರ್ಯ ಯೋಜನೆಯ ಅಂಗವಾಗಿ ಶತಮಾನೋತ್ಸವ ಸಮಿತಿ ಸಭೆ ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಹೇರಂಬ ಇಂಡಸ್ಟ್ರೀಸ್ ನ ಮುಖ್ಯಸ್ಥ, ಕೊಡುಗೈ ದಾನಿ, ಕುಳೂರು ಶಾಲಾ ಹಳೆ ವಿದ್ಯಾರ್ಥಿಯೂ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶ್ರೀ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನರವರ ಮುಂದಾಳತ್ವದಲ್ಲಿ ಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಾರ್ಡ್ ಸದಸ್ಯ ಹಾಗೂ ಶಾಲಾ ಹಳೆ ವಿದ್ಯಾರ್ಥಿಯೂ ಆಗಿರುವ ಶ್ರೀ ಜನಾರ್ದನ ಪೂಜಾರಿ ಕುಳೂರು, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಶ್ರೀಯುತ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶ್ರೀಯುತ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ರವರು ಶತಮಾನೋತ್ಸವದ ಸವಿ ನೆನಪಿಗಾಗಿ ಸುಸಜ್ಜಿತವಾದ ಬೃಹತ್ ವೇದಿಕೆ ನಿರ್ಮಾಣ ಹಾಗೂ ಶಾಲಾ ವಾಹನವನ್ನು ತಮ್ಮ ವತಿಯಿಂದ ಕೊಡುಗೆಯಾಗಿ ನೀಡುವ ಬಗ್ಗೆ ಘೋಷಣೆ ಮಾಡಿದರು. ಇವರಿಗೆ ಶಾಲಾ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇವೆ.

ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.