ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ
ಉಳ್ಳಾಲ: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಕುತ್ತಾರು,ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮ ಹತ್ಯೆಗೈದ ಯುವಕ.ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ.
ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ.ಇಂದು ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.ಕೂಡಲೆ ಮನೆಮಂದಿ ನೇಣು ಕುಣಿಕೆಯನ್ನ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ.ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.