ಕುಂಪಲದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಯುಎನ್‍ಡಿಪಿ ಮತ್ತು ಎಎಲ್‍ಸಿ ಇಂಡಿಯಾ ಸಂಸ್ಥೆಯ ವತಿಯಿಂದ 5 ದಿನದ ಉದ್ಯಮಶಿಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಕುಂಪಲದಲ್ಲಿ ಉದ್ಘಾಟನೆಗೊಂಡಿತು. ಮಹಿಳಾ ಉದ್ಯಮಿ ಗಳನ್ನು ಪ್ರೋತ್ಸಾಹಿಸಿ ಅವರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದೊಂದಿಗೆ ಸ್ತ್ರೀ ಶಕ್ತಿ ಗುಂಪಿನ ಆಸಕ್ತ ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸಿದರು. ನಾರಾಯಣ ಕುಂಪಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತಾಡಿ, ಜಿಲ್ಲಾ ಪಂಚಾಯತ್‍ನ ಮಾಜಿ ಉಪಾಧ್ಯಕ್ಷರಾದ ಸತೀಶ್ ಕುಂಪಲ, ಕುಂಪಲ ಶಾಲೆಯ ಮುಖ್ಯ ಶಿಕ್ಷಕರಾದ ಗುಲಾಬಿ, ಮಾಜಿ ಕೌನ್ಸಿಲರ್ ದಾಕ್ಷಾಯನಿ, ಸುಜಾತ, ಎಎಲ್‍ಸಿಯ ಜಿಲ್ಲಾ ಸಂಯೋಜಕರಾದ ಸೂರ್ಯನಾರಾಯಣ, ಮಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಅಧ್ಯಕ್ಷರಾದ ಹರಿಣಿ ವಿ ಕೋಟ್ಯಾನ್ ಭಾಗವಹಿಸಿದರು.ಶ್ರೀಮತಿ ಶಂಕರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸೀತಾ ರವರು ವಂದನಾರ್ಪಣೆ ಮಾಡಿದರು

Related Posts

Leave a Reply

Your email address will not be published.