HomeFresh Newsಕುಂದಾಪುರ: ಗುಂಡಿಕ್ಕಿ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹ*ತ್ಯೆ

ಕುಂದಾಪುರ: ಗುಂಡಿಕ್ಕಿ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹ*ತ್ಯೆ

ಕುಂದಾಪುರ: ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಿಗ್ಗೆ 3.30 ರ ಸುಮಾರಿಗೆ ಕುಂದಾಪುರದ ಚರ್ಚ್ ರಸ್ತೆಯಲ್ಲಿನ ಹೋಲಿ ರೋಸರಿ ಚರ್ಚ್ ಎದುರಿಗೆ ನಡೆದಿದೆ.

ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(45) ಕೊಲೆಯಾದವರು.

ಘಟನೆ ವಿವರ: ಒಂದಷ್ಟು ವ್ಯವಹಾರಗಳನ್ನು ಮಾಡಿಕೊಂಡಿದ್ದ ಐವನ್ ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೆನ್ಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಶುಕ್ರವಾರ ಮುಂಜಾನೆ ಮಹಿಖೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಈ ಘಟನೆ ನಡೆದಿದೆ. ಪಿಸ್ತುಲ್ ಮೂಲಕ ಆರೋಪಿ ಐವನ್ ಅವರಿಗೆ ಗುಂಡು ಹೊಡೆದು ಪರಾರಿಯಾಗಿದ್ದು ತೀವೃ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದು ಪರಾರಿಯಾದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಬೇರ್ಯಾವುದೇ ವ್ಯವಹಾರ ಸಂಬಂಧಪಟ್ಟ ವಿಚಾರಕ್ಕೆ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ಅಂದಾಜಿಸಲಾಗಿದೆ.

ಉಡುಪಿ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟರ್ ಜಯರಾಮ ಗೌಡ, ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಮೊದಲಾದವರು ಭೇಟಿ ನೀಡಿದ್ದಾರೆ. ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home interiors

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments