ಕುಂದಾಪುರ : ಬೆಚ್ಚಳ್ಳಿ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಸಿದ್ಧಾಪುರದ ರಂಗನಾಥ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಬೆಚ್ಚಳ್ಳಿಯ ಉದ್ಘಾಟನಾ ಸಮಾರಂಭವು ಸಿದ್ಧಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ನಡೆಯಿತು.


ಸಿದ್ಧಾಪುರ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಡಿ. ಗೋಪಾಲಕೃಷ್ಣ ಕಾಮತ್ ಅವರು ಟ್ರಸ್ಟನ್ನು ಉದ್ಘಾಟಿಸಿದರು. ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಭೋಜು ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ದಾಖಲೆಗಳ ಹಸ್ತಾಂತರ, ಕೈಪಿಡಿ ಬಿಡುಗಡೆ, ಬಾಂಡ್ ವಿತರಣೆ ನಡೆಯಿತು.


2023-24ನೇ ಸಾಲಿನಲ್ಲಿ ಶೇ.100 ಫಲಿತಾಂಶ ಪಡೆದ ಆಯ್ದ ಪ್ರೌಢಶಾಲೆಗಳನ್ನು ಗುರುತಿಸಿ ಗೌರವಿಸಲಾಯಿತು. 2023-24ನೇ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭ ಸನ್ಮಾನಿಸಲಾಯಿತು.
