ಕುಂದಾಪುರ: ಹೇರಿಕುದ್ರುವಿನಲ್ಲಿ ಮಕ್ಕಳ ಯಕ್ಷಗಾನ ಅರ್ಧದಲ್ಲೇ ಸ್ಥಗಿತ: ಯಕ್ಷಗಾನ ಪ್ರೇಮಿಗಳಿಂದ ತೀವ್ರ ಆಕ್ರೋಶ

ಕುಂದಾಪುರ ಸಮೀಪದ ಹೇರಿಕುದ್ರು ಎಂಬಲ್ಲಿ ಮಹಾಗಣಪತಿ ಮಾನಸ ಮಂದಿರದಲ್ಲಿ ರಾತ್ರಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅನುಮತಿಸಿದ ಸಮಯ ಮೀರಿ ಮೈಕ್ ಬಳಕೆ ಮಾಡಲಾಗುತ್ತಿದೆ ಎಂಬ ದೂರಿನ ಮೇಲೆ ಆಗಮಿಸಿದ ಪೆÇಲೀಸರು ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ. ಈ ಘಟನೆ ವ್ಯಾಪಕ ಟೀಕೆಗೆ, ಯಕ್ಷಗಾನ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯಕ್ಷಗಾನ ನಿಲ್ಲಿಸಬಾರದಿತ್ತು, ಖಾಸಗಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಕೆಗೆ ನಿಯಂತ್ರಣ ಹೇರಬಹುದಿತ್ತು ವಿನಾ ಪ್ರದರ್ಶನ ನಿಲ್ಲಿಸಿದ್ದು ಸರಿಯಲ್ಲ, ಎಚ್ಚರಿಕೆ ಕೊಟ್ಟು ಮುಂದಿನ ದಿನಗಳಲ್ಲಿ ಸಮಯಕ್ಕೆ ಸರಿಯಾಗಿ ಮುಗಿಸುವಂತೆ ಸೂಚಿಸಬಹುದಿತ್ತು ಎಂಬ ಆಕ್ರೋಶದ ಮಾತುಗಳು ಕೇಳಿ ಬಂದಿವೆ.

ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹೇರಿಕುದ್ರು ಯಕ್ಷ ಹಬ್ಬ ನ.3ರಿಂದ ಆರಂಭವಾಗಿದ್ದು ನ.11ರವರೆಗೆ ಆಯೋಜನೆಯಾಗಿದೆ. ನ.4ರಂದು ಗೆಜ್ಜೆನಾದ ಯಕ್ಷಗಾನ ಕಲಾ ಮಂಡಳಿ ಕುಂದಾಪುರ ಇವರಿಂದ ವಿಘ್ನೇಶಪ್ರಸಾದ ಗಂಗೊಳ್ಳಿ ನಿರ್ದೇಶನದಲ್ಲಿ ಶ್ರೀ ಕೃಷ್ಣ ಲೀಲಾಮೃತ ಪ್ರಸಂಗದ ಪ್ರದರ್ಶನ ನಡೆಯುತ್ತಿತ್ತು. ಈ ವೇಳೆ ಪೆÇಲೀಸರು ಆಗಮಿಸಿ ದೂರು ಬಂದ ಹಿನ್ನೆಲೆಯಲ್ಲಿ ಪ್ರದರ್ಶನ ಸ್ಥಗಿತಗೊಳಿಸಲು ಸೂಚಿಸಿದ್ದಾಗಿ ಮೈಕ್ ಮೂಲಕ ಘೋಷಣೆ ಮಾಡಿ ಪ್ರದರ್ಶನ ರದ್ದು ಮಾಡಲಾಯಿತು. ಆನ್‍ಲೈನ್ ಮೂಲಕ ಪ್ರದರ್ಶನ ಇದ್ದ ಕಾರಣ ಈ ತುಣುಕು ಎಲ್ಲೆಡೆ ವೈರಲ್ ಆಗಿ ವಿರೋಧ ಕೇಳಿ ಬಂದಿದೆ.

Related Posts

Leave a Reply

Your email address will not be published.