ಕುಂದಾಪುರ: ಹಾಸ್ಟೆಲ್ ವಿದ್ಯಾರ್ಥಿಗಳಿಂದ ದೀಪಾವಳಿ ಸಂಭ್ರಮ..!!
ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ ಇದರ ಸಹಯೋಗದಲ್ಲಿ ಸುಣ್ಣಾರಿಯ ಪದವಿಪೂರ್ವ ಕಾಲೇಜಿನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ದೀಪಾವಳಿ, ಗೋಪೂಜೆ, ಬಲೀಂದ್ರ ಕೂಗುವುದು, ತುಳಸಿ ಪೂಜೆ, ಕೃಷಿ ಪರಿಕರ ಮತ್ತು ಸರಸ್ವತಿ ಪೂಜೆ ಆಚರಿಸಲಾಯಿತು.
ದೀಪಾವಳಿ, ಸಂದೇಶ ನೀಡಿದ ಕುಂದಗನ್ನಡ ರಾಯಭಾರಿ ಮನು ಹಂದಾಡಿ, ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆಯ ತಿಳಿವಳಿಕ ಕಡಿಮೆಯಾಗುತ್ತಿದ್ದು, ಇಂಥ ಕಾರ್ಯಕ್ರಮಗಳು ತಿಳಿವಳಿಕೆ ಮೂಡಿಸಲು ಸಹಕಾರಿಯಾಗುತ್ತವೆ ಎಂದರು.ಸುಜ್ಞಾನ ಎಜ್ಯುಕೇಷನ್, ಟ್ರಸ್ಟ್, ಅಧ್ಯಕ್ಷ ರಮೇಶ ಶೆಟ್ಟಿ ಮಾತನಾಡಿದರು.
ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ರಾಜ್ಯದ ವಿವಿಧ ಭಾಗಗಳ ಇಲ್ಲಿ ನಿಲಯವಾಸಿಗಳಾಗಿರುವ ವಿದ್ಯಾರ್ಥಿಗಳು ಹಬ್ಬದ ಸಂಭ್ರಮದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕಾಗಿ ವಿಶೇಷ ಊಟೋಪಚಾರಗಳೊಂದಿಗೆ ಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ ಉಪಸ್ಥಿತರಿದ್ದರು. ಧಾರ್ಮಿಕ ಆಚರಣೆಯ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು, ಸಂಸ್ಕೃತ ಉಪನ್ಯಾಸಕಿ ಸುದಕ್ಷಣ, ಕನ್ನಡ ಉಪನ್ಯಾಸಕರುಗಳಾದ ನಾಗರಾಜ ಶೆಟ್ಟಿ, ಗುರುಪ್ರಸಾದ್ ನಿರೂಪಿಸಿದರು. ಹಬ್ಬದ ಅಂಗವಾಗಿ ವಿಶೇಷ ಭೋಜನ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಹಬ್ಬದೂಟದ ರುಚಿ ಸವಿದರು.