ತ್ರಾಸಿ-ಮರವಂತೆ ಬೀಚ್‍ನಲ್ಲಿ ತಿಮಿಂಗಿಲದ ಮೃತದೇಹ ಪತ್ತೆ

ಕುಂದಾಪುರ: ಕೆಲವು ದಿನಗಳ ಹಿಂದೆ ಸತ್ತ ತಿಮಿಂಗಲ ತ್ರಾಸಿ- ಮರವಂತೆ ಕಡಲತೀರದಲ್ಲಿ ಹೆದ್ದಾರಿ ಬದಿಯ ದಡದಲ್ಲಿ ಬಿದ್ದಿದೆ. ಬೆಳಗ್ಗಿನಿಂದಲೇ ತಿಮಿಂಗಿಲ ಕೊಳೆತು ನಾರುತ್ತಿದ್ದರೂ ಇದುವರೆಗೆ ಪ್ರವಾಸೋದ್ಯಮ ಇಲಾಖೆಯಾಗಲೀ ಮೀನುಗಾರಿಕಾ ಇಲಾಖೆಯಾಗಲೀ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲದಿರುವುದು ಹೆದ್ದಾರಿ ಪ್ರಯಾಣಿಕರು ಹಾಗೂ ಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಗಳವಾರ ತಡರಾತ್ರಿ ಸುಮಾರು 500 ಕೆಜಿ ತೂಕದ ತಿಮಿಂಗಿಲದ ಸತ್ತ ರೀತಿಯಲ್ಲಿ ಕಂಡುಬಂದಿದೆ. ತ್ರಾಸಿ – ಮರವಂತೆ ಬೀಚಿನ ದಡದಲ್ಲಿ ತೇಲಿ ಬಂದು ದಡಕ್ಕೆ ಅಪ್ಪಳಿಸಿ ಬಿದ್ದಿದೆ. ಬುಧವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ತಿಮಿಂಗಿಲದ ಕೊಳೆತ ವಾಸನೆ ಪ್ರಯಾಣಿಕರಿಗೆ ಹಿಂಸೆ ನೀಡಲಾರಂಭಿಸಿದೆ. ಸಮೀಪದಲ್ಲಿಯೇ ಮರವಂತೆ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಗಾರ್ಡನ್ ಇದೆ. ತೀರಕ್ಕೆ ತಾಗಿಕೊಂಡೇ ರಾಷ್ಟ್ರೀಯ ಹೆದ್ದಾರಿ 66 ಹಾದುಹೋಗುತ್ತಿದೆ. ನೂರಾರು ಪ್ರವಾಸಿಗರು ಕಡಲತೀರ ವೀಕ್ಷಣೆ ಮಾಡುತ್ತಾರೆ. ಆದರೆ ಸಂಬಂಧಪಟ್ಟ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಹೆದ್ದಾರಿಯಲ್ಲಿ ಪ್ರಯಾಣಿಸುವವರು ಹಿಡಿ ಶಾಪ ಹಾಕುತ್ತಿದ್ದಾರೆ. ಮೃತಪಟ್ಟ ತಿಮಿಂಗಲ ತೆರವಿಗೆ ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published.