ಕುಂದಾಪುರದಲ್ಲಿ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ
ಕುಂದಾಪುರ ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮವು ಕುಂದಾಪುರದ ಗಾಂಧೀ ಮೈದಾನದಲ್ಲಿ ನಡೆಯಿತು. ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂಘಟನೆ ಮೂಲಕ ಒಂದಷ್ಟು ಜನ ಸಮುದಾಯದವರು ಒಟ್ಟಾಗುವ ಅವಕಾಶ ಇಂತಹ ಕ್ರೀಡಾಕೂಟಗಳಿಂದ ಸಾಧ್ಯವಾಗು ತ್ತದೆ ಎಂದು ಬಂಟರ ಸಂಘ ಕುಂದಾಪುರ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ ಹೇಳಿದರು. ಅವರು ರವಿವಾರ ಕುಂದಾಪುರದ ಗಾಂಧಿ ಮೈದಾನ ದಲ್ಲಿ ಪ್ರಥಮವಾಗಿ ನಡೆದ ಬಂಟರ ರಾಜ್ಯಮಟ್ಟದ ಕ್ರೀಡೋತ್ಸವದ ಧ್ವಜಾರೋಹಣಗೈದು ಮಾತನಾಡಿದರು.
ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟರ ಸಂಘ ಬೆಂಗಳೂರು ಅಧ್ಯಕ್ಷ ಮುರಳೀಧರ ಹೆಗ್ಡೆ ಕ್ರೀಡಾ ಜ್ಯೋತಿ ಬೆಳಗಿ, ಸಂಘದ ಗೌರವಾಧ್ಯಕ್ಷ ಬಿ. ಉದಯಕುಮಾರ್ ಶೆಟ್ಟಿ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಕುಂದಾಪುರ ವಕೀಲರ ಸಂಘ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಶುಭಾಶಂಸನೆಗೈದರು. ಮಹಾಲಿಂಗೇಶ್ವರ ಕನ್‍ಸಕ್ಷನ್ ಆಯಂಡ್ ಕಂಪೆನಿ ಉಪ್ಪುಂದದ ಮ್ಯಾನೇಜಿಂಗ್ ಡೈರೆಕ್ಟರ್ ಗೋಕುಲ್ ಶೆಟ್ಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಲಯನ್ಸ್ ನಿಕಟ ಪೂರ್ವ ಗವರ್ನರ್ ವಿಶ್ವನಾಥ ಶೆಟ್ಟಿ, ಅರುಣ್ ಕುಮಾರ್ ಹೆಗ್ಡೆ ಕುಂದಾಪುರ, ನಕ್ಷತ್ರ ಜುವೆಲ್ಲರ್ಸ್ ಮಾಲಕ ನವೀನ್ ಹೆಗ್ಡೆ, ಬಂಟರ ಯಾನೆ ನಾಡವರ ಸಂಘ ಬ್ರಹ್ಮಾವರದ ಅಧ್ಯಕ್ಷ ಮೈರ್ಮಾಡಿ ಸುಧಾಕರ ಶೆಟ್ಟಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು, ಬೈಂದೂರು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಾಕಟ್ಟೆ ಯುವ ಮೆರಿಡಿಯನ್ ಪಾಲುದಾರ ವಿನಯ್ ಕುಮಾರ್ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ ಸಂಸಾಡಿ, ದಯಾನಂದ ಶೆಟ್ಟಿ ಕಟಪಾಡಿ, ಯುವಜನ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಕುಸುಮಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದು, ಯುವ ಬಂಟರ ಸಂಘದ ಗೌರವಾಧ್ಯಕ್ಷ ಬಿ. ಉದಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ ಬನ್ನೂರು, ಕೋಶಾಧಿಕಾರಿ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕ್ರೀಡಾಕೂಟದ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಎಲ್ಲವಯೋಮಾನದವರಿಗೂ ಅನ್ವಯವಾಗುವಂತೆ ಅಥ್ಲೆಟಿಕ್ ಸ್ಪರ್ಧೆಗಳನ್ನು ಹಾಗೂ ಗುಂಪು ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿತ್ತು.ಕ್ರೀಡಾಕೂಟದ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ ಪ್ರಸ್ತಾವಿಸಿ, ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ನಿರ್ವಹಿಸಿದರು.