ಗೃಹಿಣಿಯ ಚಿನ್ನಾಭರಣ ಎಗರಿಸಿದ ಪ್ರಕರಣ ಆರೋಪಿ ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿ

ಕುಂದಾಪುರ: ವಾರದ ಹಿಂದೆ ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ ನಡೆಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿದ ಆರೋಪಿಯನ್ನು ತ್ರಾಸಿಯ ಬಳಿ ಕುಂದಾಪುರ ಗ್ರಾಮಾಂತರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ತ್ರಾಸಿಯ ಭರತ್‍ನಗರ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿರುವ ಬೈಕ್, ಚಿನ್ನದ ಉಂಗುರ ಮತ್ತು ಗುಜ್ಜಾಡಿ ಸೊಸೈಟಿಯೊಂದರಲ್ಲಿ ಚಿನ್ನದ ಕರಿಮಣಿ ಸರ ಅಡವಿರಿಸಿ ಪಡೆದುಕೊಂಡ ನಗದು ಹಣ ಒಟ್ಟು ರೂ. 41,000 ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಸಂಜೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅಗಸ್ಟ್ 25ರವರೆಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಶಾಲಾ ಬಸ್ಸಿನಲ್ಲಿ ಬರುವ ತನ್ನ ಮಗನನ್ನು ಕರೆದುಕೊಂಡು ಹೋಗಲು ಅಗಸ್ಟ್ 5 ರಂದು ಸಂಜೆ ಕಾಡಿನಬೆಟ್ಟು ನಿವಾಸಿ ದೇವಕಿ ಪೂಜಾರಿ (32) ಅವರು ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಕೊರ್ಗಿ ಕ್ರಾಸ್ ಸಮೀಪ ಕಾಡಿನಬೆಟ್ಟು ಕಡೆಗೆ ಹೋಗುವ ರಸ್ತೆಯ ಬಳಿಯಲಿ ರಸ್ತೆಯ ಬದಿಯಲ್ಲಿ ಬಂದು ನಿಂತಿದ್ದ ವೇಳೆ ಆರೋಪಿ ದೇವಕಿಯವರ ತಲೆಗೆ ಕಬ್ಬಿಣದ ರಾಡ್‍ನಿಂದ ಗಂಭೀರವಾಗಿ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ, ಬಳೆ ಹಾಗೂ ಉಂಗುರವನ್ನು ಎಗರಿಸಿ ಪರಾರಿಯಾಗಿದ್ದನು. ಹಾಡಹಗಲೇ ಈ ಪ್ರಕರಣ ನಡೆದಿದ್ದು, ಸ್ಥಳೀಯರನ್ನು ಭಯಭೀತರನ್ನಾಗಿ ಮಾಡಿತ್ತು.

ಉಡುಪಿ ಜಿಲ್ಲಾ ಪೆÇಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪರವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್.ಕೆ. ಕುಂದಾಪುರ ಉಪವಿಭಾಗ ಹಾಗೂ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್.ರವರ ನೇತೃತ್ವದಲ್ಲಿ, ಕುಂದಾಪುರ ಗ್ರಾಮಾಂತರ ಪೆÇಲೀಸ್ ಠಾಣಾ ಪೆÇಲೀಸ್ ಉಪ ನಿರೀಕ್ಷಕರಾದ ನಿರಂಜನ್ ಗೌಡ ಬಿ. ಎಸ್, ಸಿಬ್ಬಂದಿಗಳಾದ ರಾಜು.ಬಿ, ಅನಿಲ್ ಕುಮಾರ್, ಚಿದಾನಂದ, ಜೀಪು ಚಾಲಕ ಆನಂದ, ಕುಂದಾಪುರ ಉಪವಿಭಾಗ ಅಪರಾಧ ಪತ್ತೆ ದಳದ ರಾಮು ಹೆಗ್ಡೆ ಮತ್ತು ರಾಘವೇಂದ್ರ ಉಪ್ಪುಂದ, ತಾಂತ್ರಿಕ ವಿಭಾಗದ ಸಿಬ್ಬಂದಿ ದಿನೇಶ್ ಕಾರ್ಯಾಚರಣೆಯಲ್ಲಿ ಇದ್ದರು.

Related Posts

Leave a Reply

Your email address will not be published.