ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು
ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ.ಕಾಲೇಜಿನಿಂದ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಸುಮಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.