ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ

ಕಡಬ: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ ಇದರ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲು, ನಿವೃತ್ತ (ಕೆ.ಎಸ್.ಇ.ಎಸ್.) ಅಬಕಾರಿ ಉಪ ಆಯುಕ್ತ ಗೋಪಾಲಕೃಷ್ಣ ಪುಯಿಲ, ಮರ್ದಾಳ ಗ್ರಾ.ಪಂ. ಅಧ್ಯಕ್ಷ ಹರೀಶ್ ಗೌಡ ಕೊಡಂದೂರು, ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.