ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್ ಭೇಟಿ

ಉಳ್ಳಾಲ : ಕುತ್ತಾರು ದೆಕ್ಕಾಡುವಿನ ಕೊರಗಜ್ಜ  ಆದಿತಳಕ್ಕೆ ಡಿ ಬಾಸ್  ದರ್ಶನ್  ಸಹಿತ ಹಲವು ನಟರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. 

ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರೋದಕ್ಕೆ ಆಗ್ಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲಾ ದೇವಸ್ಥಾನ ಒಂದೇ. ಎಲ್ರು ಹೇಳ್ತಾಯಿದ್ರು ಈ ಕ್ಷೇತ್ರದ ಬಗ್ಗೆ ಹಾಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೆನೆ ಎಂದರು.

ಈ ಸಂದರ್ಭ ಹಾಸ್ಯ ನಟ ಚಿಕ್ಕಣ್ಣ, ಎಜೆ ಸಂಸ್ಥೆಯ ಪ್ರಶಾಂತ್ ಮಾರ್ಲ, ಮಹಾಬಲ ಶೆಟ್ಟಿ, ವಿದ್ಯಾಚರಣ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಪ್ರೀತಮ್ ಶೆಟ್ಟಿ ಹಾಗೂ ಕೊರಗಜ್ಜ ಆದಿಸ್ಥಳ ದೆಕ್ಕಾಡುವಿನ ಟ್ರಸ್ಟೀಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.