ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ನಟ ಶಿವರಾಜ್‍ಕುಮಾರ್ ಕುಟುಂಬ

ಉಳ್ಳಾಲ: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು.

ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಮಂಗಳೂರಿಗೆ ಆಗಮಿಸಿರೋ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

kuttar shivarajkumar

ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ.ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು.ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ.ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ.ಕೊರಗಜ್ಜನಿಗೆ ವೀಲ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು.ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ,ಆಗೋದು ಬಿಡೋದು ದೈವದ ಇಚ್ಛೆ,ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.

Related Posts

Leave a Reply

Your email address will not be published.