ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ – ವಿದ್ಯಾರ್ಥಿ ಸಂಘದ ರಚನೆ, ಪ್ರತಿಜ್ಞಾ ಸ್ವೀಕಾರ ವಿಧಿ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡಿಗೆ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು 30.07.2025 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿದ ಅವರು, 1996 ರಿಂದ ಕಾಲೇಜು ಪ್ರಾರಂಭಗೊಂಡು ಇಲ್ಲಿಯ ತನಕ ನಡೆದು ಬಂದ ದಾರಿ ಮತ್ತು ಆಧುನಿಕ ತಂತ್ರಜ್ಞಾನದೊಂದಿಗಿನ ಕಾರ್ಯವೈಖರಿ ಹಾಗೂ ಅದರ ಅಳವಡಿಕೆಯ ಮಹತ್ವವನ್ನು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ಭಾಗವಹಿಸಿ ಜೀವನದಲ್ಲಿ ನಾಯಕತ್ವ ಗುಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ.ಯವರು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸುತ್ತಾ, ಕಾಲೇಜಿನ ನೂತನ ವಿದ್ಯಾರ್ಥಿ ಕ್ಷೇಮಾಭಿವೃಧಿ ಅಧಿಕಾರಿಯಾದ ಡಾ. ವಿನಯ್ ಶಂಕರ್ ಭಾರಧ್ವಾಜ್ ಬಿ. ಯವರ ಹೆಸರನ್ನು ಘೋಷಿಸಿ ವೇದಿಕೆಗೆ ಬರಮಾಡಿಕೊಂಡರು.
ಡಾ. ವಿನಯ್ ಶಂಕರ್ ಭಾರಧ್ವಾಜ್ ಬಿ. ರವರು 2025-26ನೇ ಸಾಲಿನ ನೂತನ ವಿದ್ಯಾರ್ಥಿ ಸಂಘವನ್ನು ಸಭೆಗೆ ಪರಿಚಯಿಸಿ ಅವರಿಗೆ ವಿದ್ಯಾರ್ಥಿ ಮಂಡಲದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ನೂತನ ಸ್ನಾತಕೋತ್ತರ ನಾಯಕಿಯಾಗಿ ಡಾ. ಅನುಷಾ ಮಡಪ್ಪಾಡಿ, ಪದವಿ ವಿದ್ಯಾರ್ಥಿ ನಾಯಕಿಯಾಗಿ ಕು. ನೀಲಾ ಮಹಾಂತಪ್ಪ ಎ., ವಿದ್ಯಾರ್ಥಿನಿ ಪ್ರತಿನಿಧಿಯಾಗಿ ಕು. ಚೇತನಾ ಎಂ., ಪ್ರಧಾನ ಕಾರ್ಯದರ್ಶಿಯಾಗಿ ಸಂಪತ್ ಹಿರೇಮಠ್, ಕಾರ್ಯದರ್ಶಿಯಾಗಿ ಕು. ದಾಂಡ್ರೆ ಶಾಕ್ಷಿ, ಕು.ಫಾತಿಮಾತ್ ತಮೀಜಾ, ಖಜಾಂಜಿಯಾಗಿ ವಿಶ್ವಾಸ್ ಗೌಡ ಹಾಗೂ 46 ವಿವಿಧ ಕಮೀಟಿಗಳ ಸದಸ್ಯರನ್ನೊಳಗೊಂಡ ವಿದ್ಯಾರ್ಥಿ ಸಂಘವನ್ನು ರಚನೆ ಮಾಡಲಾಯಿತು.

ವೇದಿಕೆಯಲ್ಲಿ ಕಾಲೇಜಿನ ಅಕಾಡೆಮಿಕ್ ಕೋ-ಆರ್ಡಿನೇಟರ್ ಡಾ. ಕವಿತಾ ಬಿ. ಎಂ., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ್ ಶಂಕರ್ ಭಾರಧ್ವಾಜ್ ಬಿ. ಉಪಸ್ಥಿತರಿದ್ದರು.
ಕಾಲೇಜಿನ ನಿರ್ಗಮಿತ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ, ಡಾ. ಹರ್ಷಿತಾ ಯಂ., ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್ ಹಿರೇಮಠ್ ವಂದಿಸಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕು. ಚಿನ್ಮಯಿ ಮತ್ತು ತಂಡದವರು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಕು. ಚಿಂತನ ಹಾಗೂ ಕು. ಆಯಿಷತ್ ರುಶ್ದ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಬೋಧಕೇರ ಸಿಬ್ಬಂದಿ ವರ್ಗದವರು, ಸ್ನಾತಕೋತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
