ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ವಿಭಾಗದಲ್ಲಿ 03 ರ್ಯಾಂಕ್
                                                ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅಗದ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಅವಿನಾಶ್ ಕೆ ವಿ ಅವರ ಮಾರ್ಗದರ್ಶನದಲ್ಲಿ ಡಾ. ಧನ್ಯಶ್ರೀ ಯು ಬಿ ಹಾಗೂ ಡಾ. ಪ್ರಿಯ ಪಿ., ಅಗದತಂತ್ರ ವಿಭಾಗದಲ್ಲಿ ಮೂರನೇ ರಾಂಕ್ ನ್ನು ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ. ಜಿ., ರವರ ಮಾರ್ಗದರ್ಶನ ದಲ್ಲಿ ಡಾ. ಚೇತನ ಶಣ್ಮುಗಪ್ಪ ಮುಗಳಿ, ಪಂಚಕರ್ಮ ವಿಭಾಗದಲ್ಲಿ ಒಂಭತ್ತನೇ ರಾಂಕ್ ನ್ನು ಪಡೆದಿರುತ್ತಾರೆ.
ವಿಭಾಗದ ಮುಖ್ಯಸ್ಥರುಗಳನ್ನು, ಪ್ರಾಧ್ಯಾಪಕರುಗಳನ್ನು ಹಾಗೂ ರಾಂಕ್
ಪಡೆದ ವಿದ್ಯಾರ್ಥಿಗಳನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ರಿಜಿಸ್ಟರ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಅರ್ಕಿಟೆಕ್ಟ್ ಅಕ್ಷಯ್ ಕೆ. ಸಿ., ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ, ಕಾರ್ಯದರ್ಶಿಗಳಾದ ಡಾ. ಐಶ್ವರ್ಯ ಕೆ. ಸಿ., ಶ್ರೀ. ಕೆ. ವಿ. ಹೇಮನಾಥ್, ಖಜಾಂಜಿ ಡಾ. ಗೌತಮ್ ಗೌಡ ಹಾಗೂ ಕೌನ್ಸಿಲ್ ಮೆಂಬರ್ಸ್ ಗಳು ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಅವರು ಅಭಿನಂದಿಸಿದ್ದಾರೆ.



							
							














