ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನ
ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನ. 25ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಡಿ. 25ರಿಂದ ನಡೆಯಲಿರುವ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನದ ಅಂಗವಾಗಿ ಕಾಲೇಜಿನಲ್ಲಿ ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ.ಎಂ ಇವರು ರಥಕ್ಕೆ ಹಾರ ಹಾಕುವ ಮೂಲಕ ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಕಾಲೇಜಿನ ಎಲ್ಲಾ ವೈದ್ಯರುಗಳನ್ನು ಸನ್ಮಾನಿಸಿ ಸಮ್ಮಿಲನಕ್ಕೆ ರಥ ಯಾತ್ರೆ ಸಮಿತಿಯ ಡಾ. ಶರತ್ ಕುಮಾರ್ ಹಾಗೂ ತಂಡದವರು ಆಹ್ವಾನಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

















