ಎಲ್ ಕೆ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು . ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು . ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿ ಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು . ಶ್ತೀ ವಿಶ್ವೇಶತೀರ್ಥಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು . ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು . ಅಡ್ವಾಣಿ ಯವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡರು . ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಜೀ ಮನೆ ಬಾಗಿಲಿನ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು ತನಕ ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ , ಕೃಷ್ಣ ಭಟ್ ಉಪಸ್ಥಿತರಿದ್ದರು .

l k advani

Related Posts

Leave a Reply

Your email address will not be published.