ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ : ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಇಂದು ಬಹಳ ಸಂತೋಷದ ದಿನ. ಈ ದಿನ ಬೇರೆ ವಿಚಾರವನ್ನು ನಾನು ಮಾತನಾಡಲ್ಲ. ಎಂಇಎಸ್ ಗಲಾಟೆ ಮತ್ತು ಮಹಾರಾಷ್ಟ್ರ ಮೀಸಲಾತಿ ಹೋರಾಟದ ಬಗ್ಗೆ ಸರ್ಕಾರ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಅವರು ಉಡುಪಿಯಲ್ಲಿ ಮಾಧ್ಯಮದರವ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಅಗತ್ಯ ಕಾನೂನು ಕ್ರಮಗಳಿಗೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದೆ. ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದರು. ಗೃಹಲಕ್ಷ್ಮೀ ಹಣ ವಿಳಂಬ ಸಂದಾಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ, ಆ ರೀತಿ ಯಾವುದೇ ಸಮಸ್ಯೆ ಆಗಿಲ್ಲ. ಒಂದೆರಡು ದಿನ ವಿಳಂಬ ಆಗಬಹುದು ಅಷ್ಟೇ. ಪ್ರತಿ ತಿಂಗಳು ಅವರ ಖಾತೆಗೆ ಹಾಕುವ ಸಂದರ್ಭದಲ್ಲಿ ಸ್ವಲ್ಪ ವ್ಯತ್ಯಾಸ ಆಗಬಹುದು. ಒಂದು ಕೋಟಿ 8 ಲಕ್ಷ ಜನರಿಗೆ ಖಂಡಿತವಾಗಿ ತಲುಪುತ್ತಿದೆ ಎಂದರು.