ವಕೀಲ ಕುಲ್‌ದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ : ಪುತ್ತೂರು ವಕೀಲರ ಸಂಘದಿಂದ ಪ್ರತಿಭಟನೆ

ಯುವ ವಕೀಲ ಕುಲ್‌ದೀಪ್ ಶೆಟ್ಟಿಯವರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ , ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ. ನಡೆಯಿತು

ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅವರು ಮಾತನಾಡಿ ಏಕಾಏಕಿ ಮನೆಗೆ ಆಗಮಿಸಿದ ಪೊಲೀಸರು ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿ ಶಿಷ್ಠಾಚಾರ ತೋರದೆ ಅವರ ತಂದೆ ತಾಯಿಗೂ ಹಲ್ಲೆ ನಡೆಸಿ ಉಟ್ಟ ಬಟ್ಟೆಯಲ್ಲೇ ಕುಲದೀಪ್ ಶೆಟ್ಟಿಯವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ. ಪೊಲೀಸರ ಈ ವರ್ತನೆಯನ್ನು ಪುತ್ತೂರು ವಕೀಲರ ಸಂಘ ಖಂಡಿಸುತ್ತದೆ ಎಂದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಜಯಾನಂದ ಮಾತನಾಡಿದರು.

Puttur Bar Association

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಜೊತೆ ಕಾರ್ಯದರ್ಶಿ ಸೀಮಾ ನಾಗರಾಜ್, ಖಜಾಂಜಿ ಶ್ಯಾಮಪ್ರಸಾದ್ ಕೈಲಾರ್ ಸಹಿತ ವಕೀಲರ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಿ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಹಾಯ ಕಮೀಷನರ್ ಕಚೇರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

Related Posts

Leave a Reply

Your email address will not be published.