ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯಲಿದ್ದು, ನೂತನ ಸಚಿವರ ಜೊತೆಗೆ ಉಭಯ ಮನೆಗಳ ಮುಖ್ಯಸ್ಥರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.

ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ ಅವರ ಹೆಸರನ್ನು ಅಖೈರುಗೊಳಿಸಲಾಗಿದೆ. ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಹೆಸರು ಅಂತಿಮವಾಗಿದೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಹಾಗೂ ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ಹೈಕಮಾಂಡ್ ಅಂತಿಮಗೊಳಿಸಿದೆ.
ಪಿ. ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ. ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ. ಜೆಡ್. ಜಮೀರ್ ಅಹ್ಮದ್ ಖಾನ್,
ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ,ಮಂಕಾಳ ವೈದ್ಯ, ಡಾ. ಅಜಯ್ ಸಿಂಗ್,ಎನ್. ಚಲುವರಾಯಸ್ವಾಮಿ, ಕೆ. ಎಂ. ಶಿವಲಿಂಗೇಗೌಡ, ಎಚ್. ಸಿ. ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ ರಾಯರೆಡ್ಡಿ,ವಿಜಯಾನಂದ ಕಾಶಪ್ಪನವರ, ಲಕ್ಷ್ಮಣ ಸವದಿ ಅವರು ಸಚಿವರಾಗಲಿದ್ದು, ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


