ಲೋಕ ಸಭಾ ಚುನಾವಣೆಗೆ ಉಡುಪಿ ಜಿಲ್ಲೆಯ ಮತದಾರರ ಪಟ್ಟಿ ಪ್ರಕಟ
ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು.
ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ 10,45,296 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 5,40,833 ಮಹಿಳೆಯರು, 5,04,448 ಗಂಡಸರು ಹಾಗೂ 15 ಮಂದಿ ತೃತೀಯ ಲಿಂಗಿಗಳಾಗಿದ್ದಾರೆ.
ಹೊಸದಾಗಿ ಮತದಾರ ಪಟ್ಟಿಗೆ ಸೇರಿದ ಯುವ ಸಮುದಾಯದ ಸಂಖ್ಯೆ 10,245 ಆಗಿದೆ. ಯಥಾಪ್ರಕಾರ ಮತದಾರರ ನೀಗುವಿಕೆ ಸಹ ಆಗಿದೆ.