HomeFresh Newsಮಾಣಿ: ಅಮೈಯಲ್ಲಿ ಹೊತ್ತಿ ಉರಿದ ಲಾರಿ

ಮಾಣಿ: ಅಮೈಯಲ್ಲಿ ಹೊತ್ತಿ ಉರಿದ ಲಾರಿ

ಬಿ.ಸಿರೋಡು- ಬೆಂಗಳೂರು ಹೆದ್ದಾರಿಯ ಮಾಣಿ ಸಮೀಪದ ಸತ್ತಿಕಲ್ಲು ಅಮೈ ಎಂಬಲ್ಲಿ ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ. ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ಹೊತ್ತಿಕೊಂಡಿದೆ. ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments